ಯುವತಿ ಮೇಲೆ ಹಲ್ಲೆ ಪ್ರಕರಣ: ನ್ಯಾಯಾಲಯಕ್ಕೆ ಕ್ರಿಕೆಟಿಗ ಅಮಿತ್ ಮಿಶ್ರಾ ಹಾಜರು

ಯುವತಿ ಮೇಲೆ ಹಲ್ಲೆ ಪ್ರಕರಣ: ನ್ಯಾಯಾಲಯಕ್ಕೆ ಕ್ರಿಕೆಟಿಗ ಅಮಿತ್ ಮಿಶ್ರಾ ಹಾಜರು

YK   ¦    Jun 08, 2018 05:36:55 PM (IST)
ಯುವತಿ ಮೇಲೆ ಹಲ್ಲೆ ಪ್ರಕರಣ: ನ್ಯಾಯಾಲಯಕ್ಕೆ ಕ್ರಿಕೆಟಿಗ ಅಮಿತ್ ಮಿಶ್ರಾ ಹಾಜರು

ಬೆಂಗಳೂರು:  ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ಶುಕ್ರವಾರ ಕ್ರಿಕೆಟಿಗ ಅಮಿತ್ ಮಿಶ್ರಾ ಅವರು ನಗರದ ಮೆಯೊಹಾಲ್ ಬಳಿಯ 43ನೇ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು.

2014ರಲ್ಲಿ ಬೆಂಗಳೂರಿನಲ್ಲಿ ತಾವು ತಂಗಿದ್ದ ಹೋಟೆಲ್ನಲ್ಲಿ ಯುವತಿ ಮೇಲೆ ಅಮಿತ್ ಮಿಶ್ರಾ ಹಲ್ಲೆ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಯುವತಿ ಅಶೊಕನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ಇದರ ಅನ್ವಯ ಪೊಲೀಸರು ಅಮಿತ್ ಮಿಶ್ರಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದರು. ಹಲವು ದಿನಗಳ ಬಳಿಕ ಜಾಮೀನು ಮೇಲೆ ಬಿಡುಗಡೆ ಆಗಿದ್ದರು. ಈಗ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.