ವಿಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ ಆಸ್ಪತ್ರೆಗೆ ದಾಖಲು

ವಿಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ ಆಸ್ಪತ್ರೆಗೆ ದಾಖಲು

HSA   ¦    Jun 25, 2019 04:08:19 PM (IST)
ವಿಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ ಆಸ್ಪತ್ರೆಗೆ ದಾಖಲು

ಮುಂಬಯಿ: ವೆಸ್ಟ್ ಇಂಡೀಸ್ ನ ಮಾಜಿ ಸ್ಟೈಲಿಶ್ ಆಟಗಾರ ಬ್ರಿಯಾನ್ ಲಾರಾ ಅವರನ್ನು ಮುಂಬಯಿಯ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ.

ಮಂಗಳವಾರ ಮಧ್ಯಾಹ್ನ ವೇಳೆ 50ರ ಹರೆಯದ ಲಾರಾ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ.

ಈ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ ಮತ್ತು ಇನ್ನಷ್ಟೇ ಮಾಹಿತಿ ತಿಳಿದುಬರಬೇಕಾಗಿದೆ. ಲಾರಾ ಮುಂಬಯಿಯಲ್ಲಿ ಕ್ರೀಡಾ ಚಾನೆಲ್ ಒಂದರಲ್ಲಿ ವಿಶೇಷ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಬ್ರಿಯಾನ್ ಲಾರಾ ಅವರು ಟೆಸ್ಟ್ ಕ್ರಿಕೆಟಿನಲ್ಲಿ 400 ರನ್ ಮಾಡಿದ ದಾಖಲೆ ಹೊಂದಿದ್ದಾರೆ.