ಕ್ರಿಕೆಟಿಗ ಎಸ್.ಶ್ರೀಶಾಂತ್ ಗೆ ಹೇರಿದ್ದ ನಿಷೇಧ ತೆರವು

ಕ್ರಿಕೆಟಿಗ ಎಸ್.ಶ್ರೀಶಾಂತ್ ಗೆ ಹೇರಿದ್ದ ನಿಷೇಧ ತೆರವು

YK   ¦    Mar 15, 2019 01:00:11 PM (IST)
ಕ್ರಿಕೆಟಿಗ ಎಸ್.ಶ್ರೀಶಾಂತ್ ಗೆ ಹೇರಿದ್ದ ನಿಷೇಧ ತೆರವು

ನವದೆಹಲಿ: ಸುಪ್ರೀಂಕೋರ್ಟ್ ಶುಕ್ರವಾರ ಕ್ರಿಕೆಟಿಗ ಎಸ್.ಶ್ರೀಶಾಂತ್ ಅವರಿಗೆ ಹೇರಿದ್ದ ನಿಷೇಧವನ್ನು ತೆರವುಗೊಳಿಸಿದೆ.

2013ರ ಐಪಿಎಸ್ ಸ್ಪಾಟ್ ಫಿಕ್ಸಿಂಗ್' ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ತಾನ್ ರಾಯಲ್ಸ್ ತಂಡದ ವೇಗಿ ಎಸ್.ಶ್ರೀಶಾಂತ್ ಅವರನ್ನು ಬಿಸಿಸಿಐ ಅಜೀವ ನಿಷೇಧದ ಶಿಕ್ಷೆ ನೀಡಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಶ್ರೀಶಾಂತ್ ಅವರಿಗೆ ನೀಡಿದ್ದ ಶಿಕ್ಷೆಯ ಪ್ರಮಾಣದ ಬಗ್ಗೆ ಬಿಸಿಸಿಐ ಬಿಸಿಸಿಐ 3ತಿಂಗಳೊಳಗೆ ಮರುಪರಿಶೀಲನೆ ಮಾಡಬೇಕು ಎಂದು ನಿರ್ದೇಶನವನ್ನು ನೀಡಿತ್ತ. ಇದೀಗ ಶ್ರೀಶಾಂತ್ ಅವರ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳು ಮೇಲೆ ಈ ತೀರ್ಪು ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೀಠ ಹೇಳಿದೆ.