ಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಹಾರ್ದಿಕ್ ಪಾಂಡ್ಯಗೆ ರೆಸ್ಟ್

ಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಹಾರ್ದಿಕ್ ಪಾಂಡ್ಯಗೆ ರೆಸ್ಟ್

Nov 10, 2017 07:47:30 PM (IST)
ಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಹಾರ್ದಿಕ್ ಪಾಂಡ್ಯಗೆ ರೆಸ್ಟ್

ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ ಹೇಳಿದೆ.

ಹಾರ್ದಿಕ್ ಪಾಂಡ್ಯ ಬೆನ್ನುಬೆನ್ನಿಗೆ ಸರಣಿಗಳನ್ನು ಆಡುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಆಯ್ಕೆ ಸಮಿತಿಯು ತಿಳಿಸಿದೆ.

ಶ್ರೀಲಂಕಾ ವಿರುದ್ಧ ನಡೆಯಲಿರುವ ಮೊದಲೆರಡು ಟೆಸ್ಟ್ ಪಂದ್ಯಗಳಿಂದ ಪಾಂಡ್ಯರನ್ನು ಹೊರಗಿಟ್ಟು ಟೀಂ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ.

ಟೆಸ್ಟ್ ತಂಡ
ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಕಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ.