ಐಪಿಎಲ್: ರಾಜಸ್ಥಾನ ರಾಯಲ್ಸ್ ಗೆ ಗೆಲವು

ಐಪಿಎಲ್: ರಾಜಸ್ಥಾನ ರಾಯಲ್ಸ್ ಗೆ ಗೆಲವು

YK   ¦    Apr 28, 2019 10:33:51 AM (IST)
ಐಪಿಎಲ್: ರಾಜಸ್ಥಾನ ರಾಯಲ್ಸ್ ಗೆ ಗೆಲವು

ಜೈಪುರ: ಸವಾಇ ಮಾನಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ರಾಯಲ್ಸ್ ತಂಡವು 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಜಯವನ್ನು ಪಡೆಯಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ಸನ್ ರೈಸರ್ಸ್ ತಂಡವು ಮನೀಷ್ ಪಾಂಡೆ ಅರ್ಧಶತಕದ ಬಲದಿಂದ 20 ಓವರ್ ಗಳಲ್ಲಿ 8 ವಿಕೆಟ್ ಗಳಿಗೆ 160ರನ್ ಗಳಿಸಿತು.

ಗುರಿ ಬೆನ್ನತ್ತಿದ ರಾಯಲ್ಸ್ ತಂಡವು ಲಿಯಾಮ್ ಮತ್ತು ಸಂಜು ಸ್ಯಾಮ್ಸನ್ ಅವರ ಆಟದಿಂದ 19.1ಓವರ್ ಗಳಲ್ಲಿ 3 ವಿಕೆಟ್ ಗಳಿಗೆ 161 ರನ್ ಗಳಿಸಿತು.