ಕೊಹ್ಲಿ ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್

ಕೊಹ್ಲಿ ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್

HSA   ¦    Feb 26, 2020 05:02:07 PM (IST)
ಕೊಹ್ಲಿ ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ ಸ್ಟೀವ್ ಸ್ಮಿತ್

ದುಬೈ: ಮೊದಲ ಟೆಸ್ಟ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲುಂಡಿದ್ದ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಕೂಡ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ರ‍್ಯಾಂಕಿಂಗ್ ನಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 911 ಅಂಕದೊಂದಿಗೆ ಮೊದಲ ಸ್ಥಾನಕ್ಕೇರಿರುವರು. ಕೊಹ್ಲಿ 906 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 2 ರನ್ ಮತ್ತು ಎರಡನೇ ಇನ್ನಿಂಗ್ಸ್ ನಲ್ಲಿ 19 ರನ್ ಮಾಡಿ ವಿಕೆಟ್ ಕಳಕೊಂಡಿದ್ದರು.

ನ್ಯೂಜಿಲೆಂಡ್ ನ ಕೇನ್ ವಿಲಿಯಮ್ಸನ್ ಮೂರನೇ ಸ್ಥಾನಕ್ಕೇರಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮಾರ್ನಸ್ ಲಾಬುಶೇನ್ ಮತ್ತು ಪಾಕಿಸ್ತಾನದ ಬಾಬರ್ ಅಜಂ ಅವರಿದ್ದಾರೆ.