ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ತಾನಕ್ಕೆ ರೋಚಕ ಜಯ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ತಾನಕ್ಕೆ ರೋಚಕ ಜಯ

YK   ¦    May 12, 2018 11:21:44 AM (IST)
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ತಾನಕ್ಕೆ ರೋಚಕ ಜಯ

ಜೈಪುರ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 11ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ತಾನ ರಾಯಲ್ಸ್ 4 ವಿಕೆಟ್ ಗಳ ಜಯವನ್ನು ಗಳಿಸಿದೆ.

ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯಾಟದಲ್ಲಿ ಜೋಸ್ ಬಟ್ಲರ್ ಅವರ 95 ರನ್ ಗಳ ನೆರವಿನಿಂದ ರಾಜಸ್ತಾನ ರಾಯಲ್ಸ್ ತಂಡ 4 ವಿಕೆಟ್ ಗಳಿಂದ ಜಯ ಗಳಿಸಿದೆ.

ಮೊದಲು ಬ್ಯಾಟಿಂಗ್ ಹಿಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ರಾಜಸ್ತಾನಕ್ಕೆ ಗುರಿಯನ್ನು ನೀಡಿತ್ತು. 177 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ತಾನ ರಾಯಲ್ಸ್ ತಂಡ ಇನ್ನು 1 ಎಸತೆ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.