ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಗೆ ಭಾರತ ತಂಡ ಪ್ರಕಟ

ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಗೆ ಭಾರತ ತಂಡ ಪ್ರಕಟ

HSA   ¦    Oct 11, 2018 03:07:35 PM (IST)
ವೆಸ್ಟ್ ಇಂಡೀಸ್ ವಿರುದ್ಧ ಎರಡನೇ ಟೆಸ್ಟ್ ಗೆ ಭಾರತ ತಂಡ ಪ್ರಕಟ

ಮುಂಬಯಿ: ಅ.12ರಿಂದ ಹೈದರಾಬಾದ್ ನಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ತಂಡದಲ್ಲಿ ಕೇವಲ ಒಂದು ಬದಲಾವಣೆ ಮಾಡಲಾಗಿದ್ದು, ವೇಗಿ ಮೊಹಮ್ಮದ್ ಸಿರಜ್ ಬದಲಿಗೆ ಶ್ರಾದುಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮೊದಲ ಟೆಸ್ಟ್ ಗೆ ಕಡೆಗಣಿಸಲ್ಪಟ್ಟಿದ್ದ ಹನುಮ ವಿಹಾರಿ ಮತ್ತು ಮಾಯಾಂಕ್ ಅಗರ್ವಾಲ್ ನ್ನು ಮತ್ತೆ ಕಡೆಗಣಿಸಲಾಗಿದೆ.

ಹನುಮ ವಿಹಾರ ಇಂಗ್ಲೆಂಡ್ ಪ್ರವಾಸದಲ್ಲಿ ಅರ್ಧ ಶತಕ ಬಾರಿಸಿ ಮೂರು ವಿಕೆಟ್ ಕಬಳಿಸಿದ್ದರು. ಮಾಯಾಂಕ್ ದೇಶೀಯ ಟೂರ್ನಮೆಂಟ್ ಗಳಲ್ಲಿ ಶತಕಗಳ ಮೇಲೆ ಶತಕ ಬಾರಿಸುತ್ತಿದ್ದರೂ ಆಯ್ಕೆ ಸಮಿತಿ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ.

ತಂಡ: ವಿರಾಟ್ ಕೊಹ್ಲಿ(ನಾಯಕ), ಕೆ.ಎಲ್.ರಾಹುಲ್, ಪ್ರಥ್ವಿ ಶಾ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಬ್ ಪಂತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಶ್ರಾದುಲ್ ಠಾಕೂರ್.