ಸೋಲಿನ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ನಿರ್ಧಾರ

ಸೋಲಿನ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ನಿರ್ಧಾರ

YK   ¦    May 25, 2019 12:52:50 PM (IST)
ಸೋಲಿನ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಹುಲ್ ನಿರ್ಧಾರ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಹೊಣೆಯನ್ನು ಹೊತ್ತು ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ದಾರಿಸಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಭೆ ನಡೆಸಿದ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಹೀನಾಯ ಸೋಲಿಗೆ ನಾನೇ ಕಾರಣ. ಈ ಹೊಣೆಯನ್ನು ಹೊತ್ತು ರಾಜೀನಾಮೆ ನೀಡುತ್ತೇಣೆ ಎಂದು ಪ್ರಸ್ತಾಪಿಸಿದ್ದಾರೆ.

ಆದರೆ ರಾಜೀನಾಮೆ ನಿರ್ಧಾರಕ್ಕೆ ಸಭೆಯಲ್ಲಿದ್ದ ಹಿರಿಯ ನಾಯಕರು ಒಮ್ಮತ ನೀಡಲಿಲ್ಲ. ಬಳಿಕ ರಾಹುಲ್ ಗಾಂಧಿಗೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ತಿಳಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.