ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

HSA   ¦    Mar 24, 2020 02:49:29 PM (IST)
ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಲಾಕ್ ಡೌನ್ ವೇಳೆ ಜನರು ಹೊರಗೆ ಬಂದು ತಿರುಗಾಡುತ್ತಿದ್ದ ಕಾರಣದಿಂದ ಬೇಸರಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡುವರು.

ಕೊರೋನಾ ವೈರಸ್ ಈಗ ದೇಶದಲ್ಲಿ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಜನರು ಮನೆಯಲ್ಲೇ ಇದ್ದು, ಇದು ಹರಡುವುದನ್ನು ತಡೆಯಬೇಕು ಎಂದು ಮೋದಿ ಅವರು ಕರೆ ನೀಡಿದ್ದರು.

ಆದರೆ ಕೆಲವು ರಾಜ್ಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇದ್ದರೂ ಜನರು ಮಾತ್ರ ಹೊರಗಡೆ ರಾಜಾರೋಷವಾಗಿ ತಿರುಗುತ್ತಿರುವುದು ಕಂಡುಬಂದಿತ್ತು. ಇದು ಮೋದಿ ಅವರ ಮನಸ್ಸಿಗೆ ನೋವುಂಟು ಮಾಡಿದೆ.

ಕೊರೋನಾ ವೈರಸ್ ಬಗ್ಗೆ ಸರ್ಕಾರ ಮುಂದೆ ತೆಗೆದುಕೊಳ್ಳಲಿರುವ ಕಠಿಣ ಕ್ರಮಗಳ ಬಗ್ಗೆ ಕೂಡ ಮೋದಿ ಅವರು ತಮ್ಮ ಭಾಷಣದಲ್ಲಿ ತಿಳಿಸಲಿದ್ದಾರೆ.