ಲೋಕಸಭೆ ವಿಸರ್ಜಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಲೋಕಸಭೆ ವಿಸರ್ಜಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

HSA   ¦    May 25, 2019 04:01:50 PM (IST)
ಲೋಕಸಭೆ ವಿಸರ್ಜಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 16ನೇ ಲೋಕಸಭೆ ವಿಸರ್ಜಿಸಿದ್ದು, 17ನೇ ಲೋಕಸಭೆ ಮುಂದಿನ ಕೆಲವು ದಿನಗಳಲ್ಲಿ ಅಧಿಕಾರಕ್ಕೆ ಬರಲಿದೆ.

ಶುಕ್ರವಾರ ಕೇಂದ್ರ ಸಚಿವ ಸಂಪುಟವು ಲೋಕಸಭೆ ವಿಸರ್ಜಿಸುವಂತೆ ರಾಷ್ಟ್ರಪತಿ ಅವರಿಗೆ ಶಿಫಾರಸ್ಸು ಮಾಡಿದ್ದರು. ಇದಕ್ಕೆ ಈಗ ರಾಷ್ಟ್ರಪತಿ ಸಹಿ ಮಾಡಿದ್ದಾರೆ.

ರಾಷ್ಟ್ರಪತಿ ಅವರು 16ನೇ ಲೋಕಸಭೆ ವಿಸರ್ಜಿಸಿರುವ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಎನ್ ಡಿಎ ಸರ್ಕಾರವು ಮೇ 30ರಂದು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ.

ಲೋಕಸಭೆಯಲ್ಲಿ ಚುನಾವಣೆ ಗೆದ್ದಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಷ್ಟ್ರಪತಿಗೆ ಕೇಂದ್ರ ಚುನಾವಣಾ ಆಯೋಗವು ಇಂದು ನೀಡಿದೆ.