ಬಸ್ ಡಿವೈಡರ್ ಗೆ ಡಿಕ್ಕಿ: 17 ಮಂದಿ ದುರ್ಮರಣ

ಬಸ್ ಡಿವೈಡರ್ ಗೆ ಡಿಕ್ಕಿ: 17 ಮಂದಿ ದುರ್ಮರಣ

HSA   ¦    Jun 13, 2018 09:58:45 AM (IST)
ಬಸ್ ಡಿವೈಡರ್ ಗೆ ಡಿಕ್ಕಿ: 17 ಮಂದಿ ದುರ್ಮರಣ

ಲಕ್ನೋ: ಉತ್ತರ ಪ್ರದೇಶ ಮೈನಪುರಿಯಲ್ಲಿ ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು 17 ಮಂದಿ ಮೃತಪಟ್ಟು, 35 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಅತಿವೇಗವಾಗಿ ಸಾಗುತ್ತಿದ್ದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಪರಿಣಾಮ ಬಸ್ ನಲ್ಲಿದ್ದ 17 ಮಂದಿ ಮೃತಪಟ್ಟಿದ್ದಾರೆ ಎಂದು ಆರಂಭಿಕ ತನಿಖೆಯಿಂದ ತಿಳಿದುಬಂದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಸಾವಿನ ಸಂಖ್ಯೆಯು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೊಲೀಸರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.