ಆಳ ಕಂದಕಕ್ಕೆ ಉರುಳಿದ ಬಸ್: 13 ಮಂದಿ ದುರ್ಮರಣ

ಆಳ ಕಂದಕಕ್ಕೆ ಉರುಳಿದ ಬಸ್: 13 ಮಂದಿ ದುರ್ಮರಣ

HSA   ¦    Sep 14, 2018 01:48:01 PM (IST)
ಆಳ ಕಂದಕಕ್ಕೆ ಉರುಳಿದ ಬಸ್: 13 ಮಂದಿ ದುರ್ಮರಣ

ಕಿಶ್ವಾರ್: ಮಿನಿ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಸುಮಾರು 13 ಮಂದಿ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆಯು ಜಮ್ಮು ಮತ್ತು ಕಾಶ್ಮೀರದ ಕಿಶ್ವಾರ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಗಳು ಹೇಳಿವೆ.

ಥಾಕ್ರಿ ಸಮೀಪದ ದಂಡರನ್ ಎಂಬಲ್ಲಿ ಈ ಘಟನೆ ನಡೆದಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ 300 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ.

ಬಸ್ ನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದರು ಎಂದು ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿರುವಂತಹ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಮಾರು 8 ಮಂದಿಯನ್ನು ಏರ್ ಲಿಫ್ಟ್ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

More Images