ಮಕ್ಕಾ ಬಾಂಬ್ ಸ್ಫೋಟ ಪ್ರಕರಣ: ತೀರ್ಪಿತ್ತ ಕೆಲವೇ ಗಂಟೆಗಳಲ್ಲಿ ನ್ಯಾಯಾಧೀಶರ ರಾಜೀನಾಮೆ!

ಮಕ್ಕಾ ಬಾಂಬ್ ಸ್ಫೋಟ ಪ್ರಕರಣ: ತೀರ್ಪಿತ್ತ ಕೆಲವೇ ಗಂಟೆಗಳಲ್ಲಿ ನ್ಯಾಯಾಧೀಶರ ರಾಜೀನಾಮೆ!

HSA   ¦    Apr 16, 2018 08:32:23 PM (IST)
ಮಕ್ಕಾ ಬಾಂಬ್ ಸ್ಫೋಟ ಪ್ರಕರಣ: ತೀರ್ಪಿತ್ತ ಕೆಲವೇ ಗಂಟೆಗಳಲ್ಲಿ ನ್ಯಾಯಾಧೀಶರ ರಾಜೀನಾಮೆ!

ನವದೆಹಲಿ: ಹೈದರಾಬಾದ್ ನ ಮಕ್ಕಾ ಮಸೀದಿಯಲ್ಲಿ ನಡೆದಿರುವ ಬಾಂಬ್ ಸ್ಫೋಟದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ ನ್ಯಾಯಾಧೀಶರು ಕೆಲವೇ ಗಂಟೆಗಳಲ್ಲಿ ರಾಜೀನಾಮೆ ನೀಡಿದ್ದಾರೆ.

ಎನ್ ಐಎ ನ್ಯಾಯಾಧೀಶರಾಗಿರುವ ರವೀಂದರ್ ರೆಡ್ಡಿ ಅವರು ಆಂಧ್ರ ಪ್ರದೇಶದ ಮುಖ್ಯ ನ್ಯಾಯಾಧೀಶರಿಗೆ ಸಲ್ಲಿಸಿರುವ ರಾಜೀನಾಮೆಯಲ್ಲಿ ವೈಯಕ್ತಿಕ ಕಾರಣಗಳಿಂದ ಹುದ್ದೆ ತ್ಯಜಿಸುತ್ತಿರುವುದಾಗಿ ತಿಳಿಸಿದ್ದಾರೆ.

2007ರ ಮಕ್ಕಾ ಮಸೀದಿ ಸ್ಫೋಟದ ಪ್ರಕರಣದಲ್ಲಿ ಅಸೀಮಾನಂದ ಸಹಿತ ಆರೋಪಿಗಳನ್ನು ನ್ಯಾಯಾಧೀಶರು ಖುಲಾಸೆಗೊಳಿಸಿದ್ದರು.