ಜಮ್ಮು ಕಾಶ್ಮೀರದಲ್ಲಿ ಬಸ್ ಕಂದಕ್ಕೆ -6 ಮಂದಿ ಸಾವು

ಜಮ್ಮು ಕಾಶ್ಮೀರದಲ್ಲಿ ಬಸ್ ಕಂದಕ್ಕೆ -6 ಮಂದಿ ಸಾವು

Aug 12, 2017 11:16:51 AM (IST)
ಜಮ್ಮು ಕಾಶ್ಮೀರದಲ್ಲಿ ಬಸ್ ಕಂದಕ್ಕೆ -6 ಮಂದಿ ಸಾವು

ದೋಡ: ಜಮ್ಮುಕಾಶ್ಮೀರದಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 9ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಸುಮಾರು 17 ಮಂದಿ ಪ್ರಯಾಣಿಕರು ಚಲಾಯಿಸುತ್ತಿದ್ದರು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತಿರುವಿನ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿದ್ದರಿಂದ ಈ ಘಟನೆ ನಡೆದಿದೆ.