ಕೊವಿಡ್-19 ಪ್ರಭಾವ: 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

ಕೊವಿಡ್-19 ಪ್ರಭಾವ: 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

HSA   ¦    Mar 26, 2020 02:28:38 PM (IST)
ಕೊವಿಡ್-19 ಪ್ರಭಾವ: 1.7 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

ನವದೆಹಲಿ: ಕೊವಿಡ್-19ನಿಂದಾಗಿ ದೇಶದ ಆರ್ಥಿಕತೆಯ ಮೇಲೆ ಆಗುತ್ತಿರುವ ಪರಿಣಾಮದಿಂದಾಗಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸಮಗ್ರ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ ಜನರಿಗಾಗಿ ಸುಮಾರು 1.7 ಲಕ್ಷ ಕೋಟಿ ಪ್ಯಾಕೇಜ್ ಸಿದ್ಧವಿದೆ ಮತ್ತು ಯಾರು ಕೂಡ ಹಸಿವಿನಿಂದ ಇರಲು ಬಿಡುವುದಿಲ್ಲ ಎಂದರು.

ಮೂರು ತಿಂಗಳು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿಯಲ್ಲಿ 80 ಕೋಟಿ ಬಡ ಜನರಿಗೆ ಅಗತ್ಯ ಆಹಾರ ಪದಾರ್ಥ ಸಿಗಲಿದೆ. ಐದು ಕೆಜಿ ಅಕ್ಕಿ ಅಥವಾ ಗೋಧಿ ಜತೆಗೆ ಆಹಾರ ಪದಾರ್ಥ ಉಚಿತವಾಗಿ ಸಿಗಲಿದೆ. ಇದರೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಬೇಳೆ ಸಿಗಲಿದೆ.

ರೈತರು, ಬಡ ಪಿಂಚಣಿದಾರರನ್ನು ನಗದು ವರ್ಗಾವಣೆ ಮೂಲಕ ತಲುಪಲಾಗುವುದು. ಎಪ್ರಿಲ್ ಮೊದಲ ವಾರದಲ್ಲಿ ರೈತರ ಖಾತೆಗಳಿಗೆ 2 ಸಾವಿರ ರೂಪಾಯಿ ವರ್ಗಾವಣೆ ಆಗಲಿದೆ.

ಮಹಿಳಾ ಜನ ಧನ್ ಖಾತೆ ಹೊಂದಿರುವವರು ಪ್ರತೀ ತಿಂಗಳಿಗೆ 500 ರೂಪಾಯಿ ಮೂರು ತಿಂಗಳ ಕಾಲ ಪಡೆಯುವರು.

ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವವರಿಗೆ, ಸೋಂಕಿನ ಅಪಾಯ ಇರುವವರಿಗೆ ಆರೋಗ್ಯ ವಿಮೆ. ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ಆರೋಗ್ಯ ವಿಮೆ

100 ಉದ್ಯೋಗಿಗಳು ಇರುವ ಸಂಸ್ಥೆ ಮತ್ತು ತಿಂಗಳಿಗೆ 15 ಸಾವಿರ ತನಕ ವೇತನ ಪಡೆಯುವ ಉದ್ಯೋಗಿಗಳು ಇರುವ ಸಂಸ್ಥೆಗಳಿಗೆ ಪಿಎಫ್ ಕೊಡುಗೆ.