ರಾಹುಲ್ ಗಾಂಧಿ ರಾಜೀನಾಮೆಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರು

ರಾಹುಲ್ ಗಾಂಧಿ ರಾಜೀನಾಮೆಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರು

YK   ¦    May 25, 2019 05:10:18 PM (IST)
ರಾಹುಲ್ ಗಾಂಧಿ ರಾಜೀನಾಮೆಯನ್ನು ತಿರಸ್ಕರಿಸಿದ ಕಾಂಗ್ರೆಸ್ ನಾಯಕರು

ನವದೆಹಲಿ: ರಾಹುಲ್ ಗಾಂಧಿ ಪ್ರಸ್ತಾಪಿಸಿದ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರಾಜೀನಾಮೆಯನ್ನು ಪಕ್ಷ ತಿರಸ್ಕರಿಸಿದೆ ಎಂದು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸ್ಪಷ್ಪಪಡಿಸಿದ್ದಾರೆ.

ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರಾಗಿ ರಾಹುಲ್ ಗಾಂಧಿ ಮುಂದುವರೆಯಲಿದ್ದಾರೆ. ಪಕ್ಷಕ್ಕೆ ರಾಹುಲ್ ಗಾಂಧಿ ಅವರ ಅನಿವಾರ್ಯತೆ ಹಾಗೂ ಮಾರ್ಗದರ್ಶನ ಬೇಕಾಗಿದೆ ಎಂದರು.

ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ಹೊಣೆಯನ್ನು ಒಪ್ಪಿಕೊಂಡು ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತು ಪ್ರಸ್ತಾಪಿಸಿದ್ದರು. ಆದರೆ ಕಾಂಗ್ರೆಸ್ ನಾಯಕರು ಇದಕ್ಕೆ ಒಮ್ಮತ ಸೂಚಿಸಲಿಲ್ಲ. ಸಭೆಯಲ್ಲಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಇದ್ದರು.