ಸಂಸದೀಯ ಮಂಡಳಿ ನಾಯಕನಾಗಿ ಮೋದಿ ಸರ್ವಾನುಮತದಿಂದ ಆಯ್ಕೆ

ಸಂಸದೀಯ ಮಂಡಳಿ ನಾಯಕನಾಗಿ ಮೋದಿ ಸರ್ವಾನುಮತದಿಂದ ಆಯ್ಕೆ

HSA   ¦    May 25, 2019 08:17:21 PM (IST)
ಸಂಸದೀಯ ಮಂಡಳಿ ನಾಯಕನಾಗಿ ಮೋದಿ ಸರ್ವಾನುಮತದಿಂದ ಆಯ್ಕೆ

ನವದೆಹಲಿ: ನರೇಂದ್ರ ಮೋದಿ ಅವರನ್ನು ಎನ್ ಡಿಎ ಮೈತ್ರಿಕೂಟದ ಸಂಸದೀಯ ಮಂಡಳಿ ನಾಯಕನಾಗಿ ಶನಿವಾರ ಆಯ್ಕೆ ಮಾಡಲಾಗಿದೆ.

ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಶನಿವಾರ ನಡೆದ ಸಭೆಯಲ್ಲಿ ಎನ್ ಡಿಎ ಮೈತ್ರಿಕೂಟ ಸಂಸದರು ಸರ್ವಾನುಮತದಿಂದ ಮೋದಿ ಅವರನ್ನು ನಾಯಕನಾಗಿ ಆಯ್ಕೆ ಮಾಡಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿ ಅವರ ಹೆಸರನ್ನು ಅನುಮೋದಿಸಿದರು. ಜಯಘೋಷದೊಂದಿಗೆ ಸರ್ವಾನುಮತದಿಂದ ಮೋದಿ ಅವರ ಹೆಸರನ್ನು ಪ್ರಕಟಿಸಲಾಯಿತು.

ಸಭೆಯಲ್ಲಿ ಎನ್ ಡಿಎ ಮೈತ್ರಿಕೂಟದ ಎಲ್ಲಾ ಸಂಸದರು ಭಾಗಿಯಾದರು. ಹಿರಿಯ ಮುಖಂಡರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ ಅವರು ಕೂಡ ಉಪಸ್ಥಿತರಿದ್ದರು. ನಾಯಕನಾಗಿ ಆಯ್ಕೆಯಾದ ಬಳಿಕ ನರೇಂದ್ರ ಮೋದಿ ಅವರು ಇವರಿಬ್ಬರ ಕಾಲಿಗೆರಗಿ ಆಶೀರ್ವಾದ ಪಡೆದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅವರು ಸಂಸದರನ್ನು ಉದ್ದೇಶಿಸಿ ಭಾಷಣ ಮಾಡಿದರು.