ಹೈದರಾಬಾದ್ ಮಸೀದಿ ಸ್ಪೋಟ ಪ್ರಕರಣದ ಆರೋಪಿಗಳು ದೋಷಮುಕ್ತ

ಹೈದರಾಬಾದ್ ಮಸೀದಿ ಸ್ಪೋಟ ಪ್ರಕರಣದ ಆರೋಪಿಗಳು ದೋಷಮುಕ್ತ

HSA   ¦    Apr 16, 2018 03:53:10 PM (IST)
ಹೈದರಾಬಾದ್ ಮಸೀದಿ ಸ್ಪೋಟ ಪ್ರಕರಣದ ಆರೋಪಿಗಳು ದೋಷಮುಕ್ತ

ನವದೆಹಲಿ: ಹೈದರಾಬಾದ್ ನ ಮಕ್ಕಾ ಮಸೀದಿಯಲ್ಲಿ 2007ರ ಮೇ 18ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಐದು ಮಂದಿ ಆರೋಪಿಗಳನ್ನು ಎನ್ ಐಎ ವಿಶೇಷ ನ್ಯಾಯಾಲಯವು ಸೋಮವಾರ ದೋಷ ಮುಕ್ತಗೊಳಿಸಿ ತೀರ್ಪಿತ್ತಿದೆ. ಇದರೊಂದಿಗೆ ಪ್ರಕರಣದ ಎಲ್ಲಾ ಆರೋಪಿಗಳು ದೋಷಮುಕ್ತರಾಗಿದ್ದಾರೆ.

ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ಸ್ವಾಮಿ ಅಸಿಮಾನಂದ ಸಹಿತ ಐದು ಮಂದಿ ಆರೋಪಿಗಳನ್ನು ನ್ಯಾಯಾಲಯವು ದೋಷಮುಕ್ತಗೊಳಿಸಿದೆ.

2007ರ ಮೇ 18ರಂದು ಮಕ್ಕಾ ಮಸೀದಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಸುಮಾರು 9 ಮಂದಿ ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 10 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದರಲ್ಲಿ ದೇವೇಂದ್ರ ಗುಪ್ತಾ, ಲೋಕೇಶ್ ಶರ್ಮಾ, ಸ್ವಾಮಿ ಅಸೀಮಾನಂದ, ಭರತ್ ಮೋಹನ್ ಲಾಲ್ ರತೇಶ್ವರ ಮತ್ತು ರಾಜೇಂದ್ರ ಚೌಧರಿ ಅವರನ್ನು ಮಾತ್ರ ಬಂಧಿಸಲಾಗಿತ್ತು.

ಇಬ್ಬರು ಆರೋಪಿಗಳಾದ ಸಂದೀಪ್ ವಿ ದಂಗೆ ಮತ್ತು ರಾಮಂಚಂದ್ರ ಕಲ್ಸಂಗ್ರ ಈಗಲೂ ತಲೆಮರೆಸಿಕೊಂಡಿದ್ದಾರೆ. ಸುನೀಲ್ ಜೋಶಿ ಎಂಬ ಆರೋಪಿಯನ್ನು ತನಿಖೆ ವೇಳೆ ಕೊಲೆ ಮಾಡಲಾಗಿತ್ತು.

ಪ್ರಕರಣದಲ್ಲಿ ಸುಮಾರು 226 ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ನಡಸಲಾಗಿತ್ತು ಮತ್ತು 411 ದಾಖಲೆಗಳನ್ನು ಪರಿಶೀಲಿಸಲಾಗಿತ್ತು.